ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ಮುಂಬೈನ ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯ ಚಯರ್‌ಮೆನ್ ಆಗಿರುವ ಕೂಳೂರು ಕನ್ಯಾನ ಶ್ರೀ ಸದಾಶಿವ ಕೆ. ಶೆಟ್ಟಿ ಇವರು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು “ನಾವು ನಡೆಯುವ ದಾರಿಯಲ್ಲಿ ಸಂಘರ್ಷಗಳು ಸಾಮಾನ್ಯ. ಸಂಘರ್ಷಗಳನ್ನು ತಾಳ್ಮೆಯಿಂದ ಬಗೆಹರಿಸಿ ಜೀವನದಲ್ಲಿ ಉತ್ತಮವಾಗಿ ಇರುವುದನ್ನು ಸಾಧಿಸಬೇಕು. ನಮ್ಮ ಜೀವನದಲ್ಲಿ ಸ್ವಾಮಿ ವಿವೇಕಾನಂದ ಹಾಗೂ ಸುಭಾಷ್‌ಚಂದ್ರ ಬೋಸ್‌ರಂತಹ ಮಹಾನ್ ವ್ಯಕ್ತಿಗಳನ್ನು ಆದರ್ಶವಾಗಿಟ್ಟುಕೊಂಡು ನಡೆಯಬೇಕು ಮತ್ತು ಜೀವನದಲ್ಲಿ ಇಟ್ಟ ಹೆಜ್ಜೆಯನ್ನು ಯಾವತ್ತೂ ಮರೆಯಬಾರದು” ಎಂದರು. ಈ ವಿದ್ಯಾಸಂಸ್ಥೆ ಇನ್ನಷ್ಟು ಬೆಳೆದು ದೇಶಕ್ಕೆ ಮಾದರಿಯಾಗಲಿ ಎಂದು ಹೇಳಿದರು.
ಸಂಸ್ಥೆಯ ಹಿರಿಯರಾದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರು ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರು ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ “ಹಳೇ ಬೇರು ಹೊಸ ಚಿಗುರು ಎಂಬಂತೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಆಧುನಿಕ ಶಿಕ್ಷಣವನ್ನು ಜೊತೆಗೂಡಿಸಿಕೊಂಡು ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುತ್ತಿದ್ದೇವೆ” ಎನ್ನುತ್ತಾ ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳೊಂದಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾಕೇಂದ್ರದ ಹಿತೈಷಿ ಹಾಗೂ ಮುಂಬೈನ ಉದ್ಯಮಿಯಾಗಿರುವ ಶ್ರೀ ಬಾಲಕೃಷ್ಣ ಭಂಡಾರಿ, ವಿದ್ಯಾಕೇಂದ್ರದ ಅಧ್ಯಕ್ಷರಾದ ಶ್ರೀ ನಾರಾಯಣ ಸೋಮಯಾಜಿ, ಸಹಸಂಚಾಲಕರಾದ ಶ್ರೀ ರಮೇಶ್ ಎನ್, ಆಡಳಿತ ಮಂಡಳಿ ಸದಸ್ಯರು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ವಿದ್ಯಾಕೇಂದ್ರದ ಸಂಚಾಲಕರಾದ ಶ್ರೀ ವಸಂತ ಮಾಧವ ಸ್ವಾಗತಿಸಿದರು. ಮುಖ್ಯೋಪಾಧ್ಯಾಯರಾದ ಶ್ರೀ ಗೋಪಾಲ ಎಂ ಅತಿಥಿಗಳಿಗೆ ಧನ್ಯವಾದಗೈದರು. ಕಾರ್ಯಕ್ರಮವನ್ನು ಶಿಕ್ಷಕಿ ಸೌಮ್ಯ ಪಿ. ನಿರೂಪಿಸಿದರು.