ವಿಶ್ವ ಯೋಗ ದಿನಾಚರಣೆ.

ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ವಿಶ್ವ ಯೋಗ ದಿನ ಕಾರ್ಯಕ್ರಮಕ್ಕೆ ಅತಿಥಿ ಅಭ್ಯಾಗತರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದವರು (ವಕೀಲರು ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಕೋಶಾಧಿಕಾರಿ) ಶ್ರೀ ಸತೀಶ್ ಶಿವಗಿರಿ ಇವರ “ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹಾಗೂ ನೆಮ್ಮದಿಗೆ ಪೂರಕ ವ್ಯವಸ್ಥೆ ಯೋಗ, ಪ್ರತಿದಿನವೂ ಶ್ರದ್ಧೆಯಿಂದ ಯೋಗದ ಅಭ್ಯಾಸ ಮಾಡಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದವರು ಬಾಳ್ತಿಲ ಗ್ರಾಮ ಪಂಚಾಯತ್ ನ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿರುವ ಶ್ರೀ ವಿಜಯಶಂಕರ ಆಳ್ವ ಅವರು “ಯೋಗದಿಂದ ದೇಹ ಮನಸ್ಸು ಆತ್ಮದ ಶುದ್ಧೀಕರಣ ಸಾಧ್ಯ ಹಾಗೂ ಆತ್ಮ ಪರಮಾತ್ಮನಿಗೆ ಸೇರುವಿಕೆಯ ಪ್ರಕ್ರಿಯೆ ಯೋಗ” ಎಂದು ತಿಳಿಸಿದರು . ವೇದಿಕೆಯಲ್ಲಿ ಶ್ರೀರಾಮ ವಿದ್ಯಾ ಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾಗಿರುವ ಗೋಪಾಲ್ ಶೆಣೈ ಮತ್ತು ಶ್ರೀರಾಮ ಪ್ರೌಢಶಾಲೆಯ ಮುಖ್ಯ ಗುರುಗಳಾದ ಗೋಪಾಲ ಶ್ರೀಮಾನ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಂಕಲ್ಪ ಪ್ರತಿಜ್ಞೆಯನ್ನು ಮಾಡಲಾಯಿತು. ಕಾರ್ಯಕ್ರಮದ ಅಂಗವಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆಯನ್ನು ಮಾಡಿಸಲಾಯಿತು. ಕಾರ್ಯಕ್ರಮವನ್ನು ರಾಜೇಶ್ವರಿ ನಿರೂಪಿಸಿ, ವರ್ಷಿಣಿ ಸ್ವಾಗತಿಸಿ , ಲಹರಿ ವಂದಿಸಿದರು. ಕಾರ್ಯಕ್ರಮವು ಶಾಂತಿಮಂತ್ರದೊಂದಿಗೆ ಕೊನೆಗೊಂಡಿತು.