ಉದ್ಘಾಟಕರಾಗಿ ಆಗಮಿಸಿದ ತುಳು ಚಿತ್ರರಂಗ ಹಾಗೂ ರಂಗಭೂಮಿ ಕಲಾವಿದ ಭೋಜರಾಜ ವಾಮಂಜೂರು ದೀಪ ಬೆಳಗಿಸಿ, ತಮ್ಮ ಬಾಲ್ಯದ ಸವಿನೆನಪುಗಳನ್ನು ಮೆಲುಕುಹಾಕಿ ವಿದ್ಯಾರ್ಥಿಗಳಿಗೆ ಸಿಕ್ಕಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಹೇಗೆ ಯಶಸ್ಸಿನ ಗುರಿಯನ್ನು ತಲುಪಬಹುದು ಎಂಬುದನ್ನು ತಿಳಿಸಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸಿದ ಇವರು ವಿದ್ಯಾರ್ಥಿಗಳ ಪ್ರತಿಭೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭಾಕರ ಭಟ್ ಕಲ್ಲಡ್ಕ ವಹಿಸಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಪ್ರಾಚಾರ್ಯ ಡಾ| ಸುಭಾಷಿಣಿ ಶ್ರೀವತ್ಸ, ತುಳು ಕನ್ನಡ ಚಿತ್ರರಂಗ ನಾಯಕನಟ ಪೃಥ್ವಿ ಅಂಬರ್, ತುಳು ಚಿತ್ರರಂಗ ನಾಯಕನಟ ವಿನೀತ್, ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯ ರಮೇಶ್ ಕೆ. ಕಾರ್ಯಕ್ರಮಕ್ಕೆ ಆಗಮಿಸಿ ಪ್ರದೀಪ್ತ ಸಾಂಸ್ಕೃತಿಕ ಸಂಘ, ಪ್ರತಾಪ ಕ್ರೀಡಾ ಸಂಘ, ಅಂತರ್‌ಕಾಲೇಜು ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರದ ಜೊತೆಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು ಹಾಗೂ ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಿದರು.
ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಡಾ| ಕಮಲಾ ಪ್ರಭಾಕರ ಭಟ್, ಪದವಿ ಪ್ರಾಚಾರ್ಯ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು