ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಮೈಸೂರು ಸೇಲ್ಸ್ ಇಂಟರ್ನ್ಯಾಶನಲ್ ಲಿಮಿಟೆಡ್ ಕಾಗದ ವಿಭಾಗದ ವತಿಯಿಂದ ವಿದ್ಯಾಕೇಂದ್ರದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಇವರು ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ MSILನ ಶಾಖಾ ಮುಖ್ಯಸ್ಥರಾದ ಶ್ರೀ ಶುಭಕರ ಅಜ್ರಿ, ಮಂಗಳೂರು, ವಿದ್ಯಾಕೇಂದ್ರದ ಅಧ್ಯಕ್ಷರಾದ ಶ್ರೀ ನಾರಾಯಣ ಸೋಮಯಾಜಿ, ಸಂಚಾಲಕರಾದ ಶ್ರೀ ವಸಂತ ಮಾಧವ, ಹಾಗೂ ವಿಭಾಗ ಮುಖ್ಯಸ್ಥರು, ಶಿಕ್ಷಕರು ಉಪಸ್ಥಿತರಿದ್ದರು.