ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ 3500 ವಿದ್ಯಾರ್ಥಿಗಳು ರಾಷ್ಟ್ರ ಧ್ವಜ ಹಿಡಿದು ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮೃತ ಶೋಭಾಯಾತ್ರೆ ನಡೆಸಿದರು. ಬಂಟ್ವಾಳ ಶಾಸಕರಾದ ರಾಜೇಶ್ ನಾಕ್ ಧ್ವಜಾರೋಹಣಗೈದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಸಂಚಾಲಕರಾದ ವಸಂತ ಮಾಧವ, ಸಹ ಸಂಚಾಲಕರಾದ ರಮೇಶ್ ಎನ್, ಆಡಳಿತ ಮಂಡಳಿ ಸದಸ್ಯರು, ಅಭಿವೃದ್ದಿ ಸಮಿತಿ ಸದಸ್ಯರು, ಪೋಷಕರು, ವಿಭಾಗ ಪ್ರಮುಖರು, ಬೋಧಕರು, ಬೊಧಕೇತರರು, ವಿದ್ಯಾರ್ಥಿಗಳು ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು.