ಬಳ್ಳಾರಿಯ ಶ್ರೀ ಜನಾರ್ದನ ರೆಡ್ಡಿ (ಮಾನ್ಯ ಶಾಸಕರು, ಉದ್ಯಮಿಗಳು) ಮತ್ತು ಹೈದರಾಬಾದ್ ನ ಶ್ರೀ ಮಹೇಶ್ ರೆಡ್ಡಿ (ಉದ್ಯಮಿಗಳು) ಇವರು ಇಂದು ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿ, ‘ಸರಸ್ವತಿ’ಗೆ ಪುಷ್ಪಾರ್ಚನೆ ಮಾಡಿ, ಶ್ರೀರಾಮ ಶಿಶು ಮಂದಿರ ಮತ್ತು ಪೂರ್ವಗುರುಕುಲ ಪುಟಾಣಿಗಳ ಚಟುವಟಿಕೆಗಳನ್ನು ವೀಕ್ಷಿಸಿದರು. ನಂತರ ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನಡೆದ ದೈನಂದಿನ ಪ್ರಾರ್ಥನೆಯಾದ ಸರಸ್ವತಿ ವಂದನದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾಗಿರುವ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹಾಗೂ ಪ್ರೌಢಶಾಲೆಯ ಮುಖ್ಯ ಗುರುಗಳಾದ ಗೋಪಾಲ ಶ್ರೀಮಾನ್ ಉಪಸ್ಥಿತರಿದ್ದರು.
