News & Events
ಆಗತ ಸ್ವಾಗತ ಕಾರ್ಯಕ್ರಮ
ಆಗತ ಸ್ವಾಗತ ಕಾರ್ಯಕ್ರಮ; 23-06-2026 ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ 2026-27ನೇ ಸಾಲಿನ ಹೊಸದಾಗಿ ಸೇರ್ಪಡೆಗೊಂಡಂತಹ ವಿದ್ಯಾರ್ಥಿಗಳಿಗೆ ಆಗತ ಸ್ವಾಗತ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ ಬೆಳಗುವುದರ ಮೂಲಕ ಸ್ವಾಗತಿಸಲಾಯಿತು. ಕಾರ್ಯಕ್ರಮಕ್ಕೆ ಬಂದಿರುವಂತಹ ಅತಿಥಿ ಅಭ್ಯಾಗತರಿಂದ ದೀಪ ಪ್ರಜ್ವಲನೆ ಮತ್ತು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಇಂದಿನ ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದವರು ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು ಹಾಗೂ ಮಾರ್ಗದರ್ಶಕರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್
ವಿಶ್ವ ಯೋಗ ದಿನಾಚರಣೆ.
ವಿಶ್ವ ಯೋಗ ದಿನಾಚರಣೆ. ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ವಿಶ್ವ ಯೋಗ ದಿನ ಕಾರ್ಯಕ್ರಮಕ್ಕೆ ಅತಿಥಿ ಅಭ್ಯಾಗತರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದವರು (ವಕೀಲರು ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಕೋಶಾಧಿಕಾರಿ) ಶ್ರೀ ಸತೀಶ್ ಶಿವಗಿರಿ ಇವರ “ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹಾಗೂ ನೆಮ್ಮದಿಗೆ ಪೂರಕ ವ್ಯವಸ್ಥೆ ಯೋಗ, ಪ್ರತಿದಿನವೂ ಶ್ರದ್ಧೆಯಿಂದ ಯೋಗದ ಅಭ್ಯಾಸ ಮಾಡಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದವರು ಬಾಳ್ತಿಲ ಗ್ರಾಮ ಪಂಚಾಯತ್ ನ, ಪಂಚಾಯತ್
ಶ್ರೀರಾಮ ಶಿಶುವಾಟಿಕ ನೂತನ ತರಗತಿಗಳ ಉದ್ಘಾಟನೆ, ಪ್ರವೇಶೋತ್ಸವ ಕಾರ್ಯಕ್ರಮ
ಶ್ರೀರಾಮ ಶಿಶುವಾಟಿಕ ನೂತನ ತರಗತಿಗಳ ಉದ್ಘಾಟನೆ ಕಾರ್ಯಕ್ರಮ ದಿನಾಂಕ 12/06/2026 ರಂದು ಶ್ರೀರಾಮ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ “ಶ್ರೀರಾಮ ಶಿಶುವಾಟಿಕ” ವಿಭಾಗ ಮತ್ತು ಅದರ ನೂತನ ತರಗತಿಗಳ ಉದ್ಘಾಟನೆಯನ್ನು ಡಾ.ಆರ್. ಕೆ. ಶೆಟ್ಟಿ, ಮುಂಬೈ ಮಾಡಿದರು . ಈ ಸಂದರ್ಭದಲ್ಲಿ ಶ್ರೀರಾಮ ವಿದ್ಯಾ ಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ, ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಪ್ರವೇಶೋತ್ಸವ ಕಾರ್ಯಕ್ರಮ ದಿನಾಂಕ : 12/06/2026 ರಂದು ಶ್ರೀರಾಮ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ 2026 -27ನೇ ಶೈಕ್ಷಣಿಕ
SARASWATHI POOJE 2026
ಸರಸ್ವತಿ ಪೂಜೆ ದಿನಾಂಕ 23.01.2026ರಂದು ಶ್ರೀರಾಮ ಮಂದಿರದ ರಾಮಾಂಗಣದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ವಾರ್ಷಿಕ ಕಾರ್ಯಕ್ರಮ ಸರಸ್ವತಿ ಪೂಜೆಯು ನಡೆಯಿತು. ಕಾರ್ಯಕ್ರಮದಲ್ಲಿ ಚಿತ್ರಾಪುರ ಮಠದ ಶ್ರೀ ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರವರು ವಿದ್ಯಾರ್ಥಿಗಳಿಗೆ ಧರ್ಮದ ನಿಜವಾದ ವಿಚಾರಗಳನ್ನು ತಿಳಿದು ಅನುಷ್ಠಾನಗೊಳಿಸಬೇಕು ಎಂದು ವಿದ್ಯಾರ್ಥಿಗಳಿಗೆ ಆಶೀರ್ವಚನ ಮಾಡಿದರು. ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾಗಿರುವ ಶ್ರೀ ನಾರಾಯಣ ಸೋಮಯಾಜಿ ಉಪಸ್ಥಿತರಿದ್ದರು. ಕಶೆಕೋಡಿ ಶ್ರೀ
ಶೀರೂರು ಮಠದ ಪೂಜ್ಯ ಸ್ವಾಮೀಜಿಯವರು ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ದಿನಾಂಕ: 31/12/25
ಶೀರೂರು ಮಠದ ಪೂಜ್ಯ ಸ್ವಾಮೀಜಿ ಶ್ರೀ ಶ್ರೀ ವೇದವರ್ಧನ ಶ್ರೀಪಾದಂಗಳವರು ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದರು. ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ವಿದ್ಯಾರ್ಥಿಗಳ ದೈನಂದಿನ ಪ್ರಾರ್ಥನೆಯಾದ ಸರಸ್ವತಿ ವಂದನೆಯನ್ನು ವೀಕ್ಷಿಸಿ “ಶರೀರವು ಇರುವುದು ಪರೋಪಕಾರಕ್ಕಾಗಿ ನಾವು ಕಲಿತಿರುವ ವಿದ್ಯೆಯನ್ನು ದೇಶಕ್ಕೆ ಪ್ರೇರಕವಾಗುವಂತೆ ಮಾಡಬೇಕು, ಸಂಸ್ಕಾರ ಮತ್ತು ಗುಣಗಳಿಂದ ದೇಶವನ್ನು ಕಟ್ಟಲು ವಿದ್ಯೆ ಅಗತ್ಯವಾಗಿದೆ” ಎಂದು ವಿದ್ಯಾರ್ಥಿಗಳಿಗೆ ಆಶೀರ್ವಚನ ಮಾಡಿದರು. ವೇದಿಕೆಯಲ್ಲಿ ಪೂಜ್ಯ ಸ್ವಾಮೀಜಿಯವರ ತಂದೆಯಾದ ಶ್ರೀ ಉದಯ ಕುಮಾರ ಹಾಗೂ ತಾಯಿ ಉಪಸ್ಥಿತರಿದ್ದರು. ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾಗಿರುವ
ಶ್ರೀರಾಮ ವಿದ್ಯಾಕೇಂದ್ರಕ್ಕೆ ಅತಿಥಿಗಳ ಭೇಟಿ ದಿನಾಂಕ 25.10.2025
ಬಳ್ಳಾರಿಯ ಶ್ರೀ ಜನಾರ್ದನ ರೆಡ್ಡಿ (ಮಾನ್ಯ ಶಾಸಕರು, ಉದ್ಯಮಿಗಳು) ಮತ್ತು ಹೈದರಾಬಾದ್ ನ ಶ್ರೀ ಮಹೇಶ್ ರೆಡ್ಡಿ (ಉದ್ಯಮಿಗಳು) ಇವರು ಇಂದು ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿ, ‘ಸರಸ್ವತಿ’ಗೆ ಪುಷ್ಪಾರ್ಚನೆ ಮಾಡಿ, ಶ್ರೀರಾಮ ಶಿಶು ಮಂದಿರ ಮತ್ತು ಪೂರ್ವಗುರುಕುಲ ಪುಟಾಣಿಗಳ ಚಟುವಟಿಕೆಗಳನ್ನು ವೀಕ್ಷಿಸಿದರು. ನಂತರ ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನಡೆದ ದೈನಂದಿನ ಪ್ರಾರ್ಥನೆಯಾದ ಸರಸ್ವತಿ ವಂದನದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾಗಿರುವ ಡಾ.
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸರಸ್ವತಿ ಮಂಟಪ ಲೋಕಾರ್ಪಣೆ – 13.10.2025
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸರಸ್ವತಿ ಮಂಟಪ ಲೋಕಾರ್ಪಣೆ – 13.10.2025 ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕ ಇಲ್ಲಿ ಸರಸ್ವತಿ ಮಂಟಪದ ಲೋಕಾರ್ಪಣೆಯು ಶೃಂಗೇರಿ ಶಾರದಾಪೀಠಾಧೀಶ್ವರರಾದ ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳವರು, ಇವರ ದಿವ್ಯಹಸ್ತದಿಂದ ನೆರವೇರಿತು. ಶ್ರೀರಾಮ ಶಿಶುಮಂದಿರ ಹಾಗೂ ಶ್ರೀರಾಮ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ನೂತನವಾಗಿ ನಿರ್ಮಿಸಿದ ಸರಸ್ವತಿ ಮಂಟಪವನ್ನು ಪರದೆ ಸರಿಸಿ ಅನಾವರಣಗೊಳಿಸಿ ಪೂಜೆ ಸಲ್ಲಿಸಿ ಶೃಂಗೇರಿ ಶಾರದಾಪೀಠಾಧೀಶ್ವರರಾದ ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ