ಸರಸ್ವತಿ ಪೂಜೆ
ದಿನಾಂಕ 23.01.2026ರಂದು ಶ್ರೀರಾಮ ಮಂದಿರದ ರಾಮಾಂಗಣದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ವಾರ್ಷಿಕ ಕಾರ್ಯಕ್ರಮ ಸರಸ್ವತಿ ಪೂಜೆಯು ನಡೆಯಿತು. ಕಾರ್ಯಕ್ರಮದಲ್ಲಿ ಚಿತ್ರಾಪುರ ಮಠದ ಶ್ರೀ ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರವರು ವಿದ್ಯಾರ್ಥಿಗಳಿಗೆ ಧರ್ಮದ ನಿಜವಾದ ವಿಚಾರಗಳನ್ನು ತಿಳಿದು ಅನುಷ್ಠಾನಗೊಳಿಸಬೇಕು ಎಂದು ವಿದ್ಯಾರ್ಥಿಗಳಿಗೆ ಆಶೀರ್ವಚನ ಮಾಡಿದರು. ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾಗಿರುವ ಶ್ರೀ ನಾರಾಯಣ ಸೋಮಯಾಜಿ ಉಪಸ್ಥಿತರಿದ್ದರು. ಕಶೆಕೋಡಿ ಶ್ರೀ ಸೂರ್ಯನಾರಾಯಣ ಭಟ್ ನೇತೃತ್ವದಲ್ಲಿ ಪೂಜೆಯು ನಡೆಯಿತು. ಎಲ್ಲಾ ವಿಭಾಗದ ಮುಖ್ಯಸ್ಥರು ಶಿಕ್ಷಕರು ಶಿಕ್ಷಕೇತರರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಅಕ್ಷತಾ ಲಕ್ಷ್ಮಿ ನಡೆಸಿ, ಜಯಸೂರ್ಯ ವಂದಿಸಿದನು.

