ಕಲ್ಲಡ್ಕ ಶ್ರೀರಾಮ ಸೆಕೆಂಡರಿ ಸ್ಕೂಲ್ ಆಂಗ್ಲ ಮಾಧ್ಯಮ ಇದರ ಆರಂಭೋತ್ಸವ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್, ಕಲ್ಲಡ್ಕ ಇವರು ದೀಪ ಬೆಳಗಿಸಿ, ಭಾರತಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು. ವಿದ್ಯಾಕೇಂದ್ರದ ಅಧ್ಯಕ್ಷರಾದ ಶ್ರೀ ನಾರಾಯಣ ಸೋಮಯಾಜಿ, ಸಂಚಾಲಕರಾದ ಶ್ರೀ ವಸಂತ ಮಾಧವ, ಸಹ ಸಂಚಾಲಕರಾದ ಶ್ರೀ ರಮೇಶ್ ಎನ್. ಉಪಪ್ರಾಂಶುಪಾಲರಾದ ಶ್ರೀ ತಿರುಮಲೇಶ್ವರ ಪ್ರಶಾಂತ್, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ತಮ್ಮ ಪರಿಚಯ ಮಾಡಿಕೊಂಡು ಹಿರಿಯರಿಂದ ಆಶಿರ್ವಾದ ಪಡೆದುಕೊಂಡರು.